Kannada NewsKarnataka NewsLatest

*ಪೆನ್ ಡ್ರೈವ್ ಪ್ರಕರಣ: ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ತಡೆಯಾಜ್ಞೆ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

Home add -Advt

ಪೆನ್ ಡ್ರೈವ್ ಪ್ರಕರಣಕ್ಕೆ ಅನಗತ್ಯವಾಗಿ ದೇವೇಗೌಡರ ಹೆಸರನ್ನು ಹಾಗೂ ತಮ್ಮ ಹೆಸರನ್ನು ಎಳೆದು ಸುದ್ದಿ ಪ್ರಸಾರ ಮಾಡಲಾಗುತ್ತಿದ್ದು, ತಮ್ಮ ಹೆಸರನ್ನು ಬಳಸದಂತೆ ನಿರ್ಬಂಧಕಾಜ್ಞೆ ನೀಡುವಂತೆ ಹೆಚ್.ಡಿ.ಕೆ ಬೆಂಗಳೂರಿನ 34ನೇ ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು.

ಮನವಿ ಪರುಗಣಿಸಿದ ಕೋರ್ಟ್, ಸಾಕ್ಷಾಧಾರಗಳಿಲದೇ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ.ದೇವೇಗೌಡರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬರದು ಎಂದು ತಡೆಯಾಜ್ಞೆ ನೀಡಿದೆ.

Related Articles

Back to top button