Belagavi NewsBelgaum NewsKannada NewsKarnataka News

*ಬೆಳಗಾವಿ ಸೇರಿದಂತೆ 23 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕೇರಳ ಮತ್ತು ನೆರೆಹೊರೆಯ ಕರ್ನಾಟಕದ ಜಿಲ್ಲೆಗಳ ಮೇಲೆ ಚಂಡಮಾರುತದ ಪರಿಚಲನೆಯ ಪ್ರಭಾವ ಬೀರುವ ಹಿನ್ನಲೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ 23 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹಲವು ಜಿಲ್ಲೆಗಳಿಗೆ ವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

Home add -Advt

ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಕಳೆದೆರೆಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.‌

Related Articles

Back to top button