ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದ್ದು, ಕೆಲ ಕಾಲ ಆಸ್ಪತ್ರೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಂಗಳೂರು ಪೊಲೀಸರ ಇ-ಮೇಲ್ ಗೆ ಅಕೌಂಟ್ ಗೆ ಬಂದಿರುವ ಸಂದೇಶದಲ್ಲಿ ನಗರದ ಸೆಂಟ್ ಫಿಲೋಮಿನಾ ಆಸ್ಪತ್ರೆ ಸೇರಿದಂತೆ 6 ಆಸ್ಪತ್ರೆಗಳಿಗೆ ಬಾಂಬ್ ಇಟ್ಟಿರುವ ಬಗ್ಗೆ ಸಂದೇಶ ಬಂದಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ