Kannada NewsKarnataka NewsLatest

*ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಪ್ರೀತಿ-ಪೇಮದ ವಿಚಾರವಾಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಬೆಂಗಳೂರಿನ ಹಲಸೂರಿನ ಜೋಗುಪಾಳ್ಯದಲ್ಲಿ ನಡೆದಿದೆ.

27 ವರ್ಷದ ಯುವತಿ ಪ್ರೀತಿ ವಿಚಾರವಾಗಿ ಮನನೊಂದು ಇಂದು ಬೆಳಿಗ್ಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಹೊಯ್ಸಳ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯುವತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button