ಪ್ರಗತಿವಾಹಿನಿ ಸುದ್ದಿ: ನಿನ್ನೆ ವಿವಿಧೆಡೆ ಸಿಡಿಲು ಬಡಿದಿರುವ ಕಾರಣ 11 ಜನರು ಸಾವನ್ನಪ್ಪಿರುವ ದಾರುಣ ಘಟನೆ ಪಶ್ವಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.
ಗುರುವಾರ ಮಾಲ್ಡಾ ಜಿಲ್ಲೆಯಲ್ಲಿ ಗುಡುಗಿ ಸಹಿತ ಭಾರೀ ಮಳೆ ಸುರಿದಿದೆ. ದಿಢೀರನೇ ಸುರಿದ ಧಾರಾಕಾರ ಮಳೆ ಅಪಾರ ಹಾನಿಯನ್ನುಂಟು ಮಾಡಿದೆ. ಜಿಲ್ಲೆಯ ವಿವಿಧೆಡೆ ಸಿಡಿಲು ಬಡಿದು 11 ಜನರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.
ಮೃತರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಇವರು ಇಬ್ಬರೂ ಮಾಣಿಕ್ಚಾಕ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಗಳು. ಮೂವರು ಮಾಲ್ಡಾ ಪೊಲೀಸ್ ಠಾಣೆ ವ್ಯಾಪ್ತಿಯ ಸಹಾಪುರದವರು. ಮತ್ತಿಬ್ಬರು ಗಜೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಆದಿನಾ ಮತ್ತು ರಟುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲುಪುರದವರು. ಮತ್ತೊಂದೆಡೆ ಹರಿಶ್ಚಂದ್ರಾಪುರದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಉಳಿದವರು ಇಂಗ್ಲಿಷ್ಬಜಾರ್ ಮತ್ತು ಮಾಣಿಕ್ಚಾಕ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಗಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ