ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ವೀರಾಪುರ ಓಣಿಯ ಯುವತಿ ಅಂಜಲಿ ಅಂಬಿಗೇರಳನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ದಾವಣಗೆರೆ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಲಾಗಿದೆ.
ಅಂಜಲಿ ಹತ್ಯೆ ಬಳಿಕ ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್, ಮೈಸೂರಿನ ಮಹಾರಾಜಾ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಮೈಸೂರಿನಿಂದ ಮತ್ತೆ ಹುಬ್ಬಳ್ಳಿಗೆ ರೈಲಿನಲ್ಲಿ ಆಗಮಿಸಿದ್ದ. ಈ ವೇಳೆ ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಈ ವೇಳೆ ಸಹ ಪ್ರಯಾಣಿಕರು ಆರೋಪಿ ಗಿರೀಶ್ ನನ್ನು ಹಿಡಿದು ಥಳಿಸಿದ್ದರು. ಅಲ್ಲದೇ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಬಳಿಕ ದಾವಣಗೆರೆಯ ಮಾಯಕೊಂಡ ರೈಲು ನಿಲ್ದಾಣದಲ್ಲಿ ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 15ರಂದು ಮುಂಜಾನೆ ಹುಬ್ಬಳ್ಳಿಯಲ್ಲಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಯುವತಿ ಅಂಜಲಿಯನ್ನು ಮನೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ