Kannada NewsKarnataka NewsPolitics

*ಅಂಜಲಿ ಕೊಲೆ ಆರೋಪಿ‌ ಅರೆಸ್ಟ್: ಗೃಹ ಸಚಿವ ಪರಮೇಶ್ವರ ಹೇಳಿದ್ದೇನು…?* 

ಪ್ರಗತಿವಾಹಿನಿ‌ ಸುದ್ದಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ್ ಸಾವಂತನನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್‍ನಲ್ಲಿ ಪೊಲೀಸರ ಲೋಪ ಇದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅವರ ಅಜ್ಜಿ ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ, ಯಾವುದೇ ದೂರು ನೀಡಿರಲಿಲ್ಲ. ಹಾಗಾಗಿ ಕರ್ತವ್ಯ ಲೋಪದಡಿ ಪೊಲೀಸ್ ಇನ್‍ಪೆಕ್ಟರ್ ಮತ್ತು ಮಹಿಳಾ ಹೆಡ್‍ಕಾನ್‍ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ. ಸದ್ಯ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಜ್ವಲ್‍ನನ್ನು ಕರೆತರುವ ಕೆಲಸ ನಡೆಯುತ್ತಿದೆ. ಪ್ರಜ್ವಲ್ ಕರೆತಂದು ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಬಳ್ಳೆಯ ಕೆಲಸ ಮಾಡುತ್ತಿದೆ ಎಂದು ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆತರುವ ಕುರಿತು ಮಾಹಿತಿ ನೀಡಿದರು.

Home add -Advt

ಪ್ರಕರಣವು ತನಿಖೆ ಹಂತದಲ್ಲಿದೆ. ಅನೇಕ ವಿಚಾರವನ್ನು ಸಾರ್ವಜನಿಕಗೊಳಿಸುವಂತಿಲ್ಲ. ಎಸ್‍ಐಟಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಸ್‍ಐಟಿ ವರದಿ ಮಂಡ್ಯ ಶಾಸಕರಿಗೆ ಮೊದಲೇ ಗೊತ್ತಿರುತ್ತದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯಿಸಿದರು.‌

Related Articles

Back to top button