*ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವು; ತೀವ್ರಗೊಂಡ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಶವ ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ಹಾಸ್ಟೇಲ್ ನಲ್ಲಿ ಪತ್ತೆಯಾಗಿದ್ದು, ವಿದ್ಯಾರ್ಥಿನಿ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇದರಿಂದ ಕಂಗಾಲಾಗಿರುವ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿರುವ ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ಈ ದುರಂತ ನಡೆದಿದೆ. ಹರ್ಷಿತಾ ಮೃತ ವಿದ್ಯಾರ್ಥಿನಿ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ಹರ್ಷಿತಾ, ಚಂದಾಪುರ ಬಳಿಯ ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ಕಾಲೇಜಿನಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಳು. ಇದೀಗ ಏಕಾಏಕಿ ಹಾಸ್ಟೇಲ್ ರೂಮ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.
ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್ ಅವ್ಯವಸ್ಥೆ ಆಗರವಾಗಿದೆ. ವಾರ್ಡನ್ ಕೂಡ ಇಲ್ಲ. ಯಾವುದೇ ಸಮಸ್ಯೆಗೂ ಕಾಲೇಜು ಆಡಳಿತ ಮಂದಳಿ ಸ್ಪಂದಿಸುತ್ತಿಲ್ಲ. ಸಿಸಿಟಿವಿ ಕ್ಯಾಮರಗಳು ಯಾವುದೇ ಕಾರ್ಯನಿರ್ವಹಿಸುತ್ತಲೂ ಇಲ್ಲ. ಹರ್ಷಿತಾ ಸಾವು ಕೊಲೆ ಎಂಬ ಆನುಮಾನವಿದೆ ನ್ಯಾಯ ಕೊಡಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ