Education

*ಎಸ್.ಎಸ್.ಎಲ್.ಸಿ ಗ್ರೇಸ್ ಮಾರ್ಕ್ಸ್ ರದ್ದು*

ಪ್ರಗತಿವಾಹಿನಿ ಸುದ್ದಿ: ಈಬಾರಿಯೂ ಎಸ್.ಎಸ್.ಎಲ್.ಸಿಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಿರುವ ಶಿಕ್ಷಣ ಇಲಾಖೆ ಕ್ರಮದಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಈಗಾಗಲೇ ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಿ ಕೆಇಎ ಮಾಡಿದ ಎಡವಟ್ಟಿಗೆ ಸರ್ಕಾರ ಮುಜುಗರಕ್ಕೀಡಾಗಿತ್ತು. ಇದರ ಬೆನ್ನಲ್ಲೇ ಕೆಇಎ ಎಂಡಿ ರಮ್ಯಾ ಅವರನ್ನು ಎತ್ತಂಗಡಿ ಮಾಡಲಾಗಿತ್ತು. ಇದೀಗ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಿರುವ ಶಿಕ್ಷಣ ಇಲಾಖೆ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಸಿಎಂ ಹಾಗೂ ಡಿಸಿಎಂ ಅಧಿಕರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಸ್.ಎಸ್.ಎಲ್.ಸಿಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಿದ್ದರ ಕಾರಣವೇನು? ಯಾವ ಉದ್ದೇಶಕ್ಕೆ ಹೀಗೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.

ಅಲ್ಲದೇ ವಿದ್ಯಾರ್ಥಿಗಳು ಅವರವರ ರ್ಹತೆ ಮೇಲೆ ಪ್ರಗತಿ ಸಾಧಿಸಬೇಕು. ಗ್ರೇಸ್ ಮಾರ್ಕ್ಸ್ ನೀಡಿದರೆ ಅವರ ಸ್ಪರ್ಧಾ ಸಾಮರ್ಥ್ಯ ಕಡಿಮೆ ಆಗುವುದಿಲ್ಲವೇ? ಎಂದು ಕಿಡಿಕಾರಿದ್ದಾರೆ.

ಈ ವೇಳೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕೋವಿಡ್ ಸಂದರ್ಭದಲ್ಲಿ 5-10 ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದೆವು ಎಂದು ಹೇಳಿದ್ದಾರೆ. ಕೋವಿಡ್ ಇದ್ದಾಗ ಹೆಚ್ಚಿಸಿದ್ದರೆ ಈಗ ಕೋವಿಡ್ ಇದೆಯಾ? ಈವರ್ಷ ಯಾಕೆ ಗ್ರೇಸ್ ಮಾರ್ಕ್ಸ್ ಕೊತ್ಟಿದ್ದೀರಿ? ಎಂದು ಪ್ರಶ್ನಿಸಿದರು. ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ರದ್ದು ಮಾಡಬೇಕು ಎಂದು ಸೂಚಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button