ಪ್ರಗತಿವಾಹಿನಿ ಸುದ್ದಿ: 35ಕ್ಕೂ ಹೆಚ್ಚು ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿಹೊತ್ತಿಕೊಂಡು, ಎಂಟು ಜಮ ಸಜೀವದಹನವಾಗಿದ್ದಾರೆ. ಇನ್ನು ಈ ಘಟನೆಯಲ್ಲಿ 24ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ಈ ಘಟನೆಯು ಇಂದು ಬೆಳ್ಳಂಬೆಳಗ್ಗೆ ನುಹ್ ಬಳಿಯ ಕುಂಡ್ಲಿ ಮನೇಸರ್ ಪಲ್ವಾಲ್ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಾಹಿತಿ ಸಿಕ್ಕಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ