ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮೌನಮುರಿದಿದ್ದಾರೆ.
ತಮ್ಮ 91ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ, ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ರೇವನ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಹಾಗಾಗಿ ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ಇನ್ನು ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್.ಡಿ.ಕೆ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ. ಅವರ ಹೆಸರನ್ನು ಹೇಳಲು ಹೋಗುವುದಿಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಎಲ್ಲಾ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ, ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ