ಪ್ರಗತಿವಾಹಿನಿ ಸುದ್ದಿ: ವಾಯುಬಾರ ಕುಸಿತ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದ್ದು, ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ಕಿ.ಮೀಯಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ