ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಮಹಿಳೆ ರೆಸಾರ್ಟ್ ನಲ್ಲಿ ಜಿಪ್ ಲೈನ್ ತುಂಡಾಗಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ ನಲ್ಲಿ ನಡೆದಿದೆ.
ಅತ್ತಿಬೆಲೆ ಮೂಲದ 35 ವರ್ಷದ ರಂಜಿನಿ ಮೃತ ಮಹಿಳೆ. ವೀಕ್ ಎಂಡ್ ಹಿನ್ನೆಲೆಯಲ್ಲಿ 18 ಜನ ಸ್ನೇಹಿತರ ಜೊತೆ ಜಂಗಲ್ ಟ್ರಯಲ್ಸ್ ರೆಸಾರ್ಟ್ ಗೆ ಮಹಿಳೆ ಬಂದಿದ್ದರು. ಸಾಹಸ ಕ್ರೀಡೆ ತಂತಿಯ ಜಿಪ್ ನಲ್ಲಿ ಮಹಿಳೆ ಕುಳಿತಿದ್ದ ವೇಳೆ ಜಿಪ್ ಲೈನ್ ಏಕಾಏಕಿ ತುಂಡಾಗಿ ಬಿದ್ದಿದೆ. ನೆಲಕ್ಕೆ ಬಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ರೆಸಾರ್ಟ್ ಮ್ಯಾನೇಜರ್ ಪುಟ್ಟಮಾದು ಎಂಬುವವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ