ಪ್ರಗತಿವಾಹಿನಿ ಸುದ್ದಿ: ಮುರುಡೇಶ್ವರಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಮಗು ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೂಡ್ಲೂರು ಗೇಟ್ ಬಳಿ ನಡೆದಿದೆ.
2 ವರ್ಷದ ಮಗು ವಿಕ್ರಾಂತ್ ಹಾಗೂ ಕಾರು ಚಾಲಕ ಪೃಥ್ವಿ (36) ಮೃತ ದುರ್ದೈವಿಗಳು. ಮೃತರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು. ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಬ್ಬಿಯಿಂದ ಮುರುಡೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬೀರೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ