Kannada NewsKarnataka NewsNationalPolitics

*ಬೆಂಗಳೂರಿನ ಮಾಲ್, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ*

ಪ್ರಗತಿವಾಹಿನಿ‌ ಸುದ್ದಿ: ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ ಗಳು, ಗೇಮಿಂಗ್ ಜೋನ್ ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ,”ಗುಜರಾತಿನ ರಾಜ್ ಕೋಟ್ ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿ ಅವಘಡ ಅತ್ಯಂತ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು ಎಂದು ಆದೇಶ ನೀಡಿದ್ದಾರೆ.

ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button