ಯಡಿಯೂರಪ್ಪ ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –
ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್)ದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.
ಮುಖ್ಯಮಂತ್ರಿಗಳ ಗೃಹ ನಿವಾಸ ಡಾಲರ್ಸ್ ಕಾಲನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಆಯ್ಕೆಗೆ ಸಹಕಾರ ನೀಡಿರುವ ಸಿಎಂ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕೆಎಂಎಫ್ನ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದರು.
ರೈತಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ದೇಶದಲ್ಲಿಯೇ ಕೆಎಂಎಫ್ನ್ನು ನಂ.೧ ಸ್ಥಾನಕ್ಕೆ ತರಲು ಶ್ರಮಿಸಬೇಕು. ಇದಕ್ಕಾಗಿ ನೂತನ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸರ್ಕಾರದ ಪರವಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಎಂ.ವ್ಹಿ. ನಾಗರಾಜ್ ಹಾಗೂ ಕೆಎಂಎಫ್ನ ನಿರ್ದೆಶಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ