Politics

*ಕೊನೆಗೂ ಪ್ರತ್ಯಕ್ಷವಾದ ಸಂಸದ ಪ್ರಜ್ವಲ್ ರೇವಣ್ಣ*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬರೋಬ್ಬರಿ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದಾರೆ. ವಿದೇಶದಲ್ಲಿದ್ದುಕೊಂಡೇ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.

ನಾನು ವಿದೇಶಕ್ಕೆ ಹೋಗಿದ್ದು ಪ್ರೀ-ಪ್ಲಾನ್. ನನ್ನ ವಿದೇಶ ಪ್ರವಾಣ ಮೊದಲೇ ನಿಗದಿಯಾಗಿತ್ತು. ಮೇ 31ಕ್ಕೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

ನನ್ನ ತಂದೆ, ತಾಯಿ, ತಾತನಿಗೆ ಕ್ಷಮೆ ಕೋರ್ತೀನಿ. ಜನರಿಗೆ, ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೇಳುತ್ತೇನೆ. ವಿದೇಶಕ್ಕೆ ಹೋಗುವುದು ಮೊದಲೇ ನಿಗದಿಯಾಗಿತ್ತು. ಏಪ್ರಿಲ್ 26ರಂದು ವಿದೇಶ ಪ್ರಯಾಣ ನಿಗದಿಯಾಗಿತ್ತು. ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಆರೋಪ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button