ಪ್ರಗತಿವಾಹಿನಿ ಸುದ್ದಿ: ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ದಾರುಣ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಬಳಿಯ ಚಿಂಚಣಿ ಪ್ರದೇಶದಲ್ಲಿ ನಡೆದಿದೆ.
ಮಂಗಳವಾರ ಮಧ್ಯ ರಾತ್ರಿ ಈ ದುರಂತ ಸಂಭವಿಸಿದ್ದು ಬೆಳಗ್ಗೆ ಬೆಳಕಿಗೆ ಬಂದಿದೆ. ಹುಟ್ಟುಹಬ್ಬದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮನೆಗೆ ವಾಪಸ್ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಈ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ.
ಮೃತರನ್ನು ಸಿವಿಲ್ ಇಂಜಿನಿಯರ್ ಜಗನ್ನಾಥ್ ಪಾಟೀಲ್ (60) ಪತ್ನಿ ಸುಜಾತ ಪಾಟೀಲ್ (55) ಪುತ್ರಿ ಪ್ರಿಯಾಂಕಾ ಖರಾಡೆ (30), ಮೊಮ್ಮಗಳು ಧ್ರುವ (3), ರಾಜೀವಿ 2) ಮತ್ತು ಕಾರ್ತಿಕಿ (1) ಎಂದು ಗುರುತಿಸಲಾಗಿದೆ. ಮತ್ತೋರ್ವ ಪುತ್ರಿ ಸ್ವಪ್ನಲಿ (30) ಎಂಬುವವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ