ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಆಗಮನವಾಗಲಿದೆ. ಈಗಾಗಲೇ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಸಮಾಧಾನಕರ ಸುದ್ದಿ ಬಂದಿದ್ದು ಈ ಬಾರಿ ಮುಂಗಾರು ಮಳೆ ಉತ್ತಮವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮಿಸಲಿದೆ. ಜೂನ್ 2ರಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ದಕ್ಷಿಣ ಒಳನಡು ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದೆ. ಬಳಿಕ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆ ಮೋದಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ