Politics

*ಸಂಸದ ಪ್ರಜ್ವಲ್ ರೇವಣ್ಣ SIT ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ.

Home add -Advt

ಜರ್ಮನಿಯಿಂದ ಬೆಂಗಳೂರಿಗೆ ವಾಪಾಸ್ ಆಗಿದ್ದ ಪ್ರಜ್ವಲ್ ರೇವಣ್ಣನನ್ನು ತಡ ರಾತ್ರಿ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿಯೆ ಬಂಧಿಸಿದ್ದರು. ಇದೀಗ ಪ್ರಜ್ವಲ್ ನನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಿದ್ದ ಎಸ್ ಐಟಿ 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿದೆ.

ಎಸ್ಐಟಿ ವಾದ ಹಾಗೂ ಮನವಿಗೆ ಸ್ಪಂದಿಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣನನ್ನು ಜೂನ್ 6ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.


Related Articles

Back to top button