Kannada NewsLatest

ಪ್ರೇಮಲತಾ ಮಲಾರಮನ್ನನ್ ನಿಧನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶೋಕ

ಪ್ರೇಮಲತಾ ಮಲಾರಮನ್ನನ್ ನಿಧನಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶೋಕ

ಪ್ರಗತಿವಾಹಿನಿ ಸುದ್ದಿ, ಪುದುಚೇರಿ 
ಪುದುಚೇರಿ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪ್ರೇಮಲತಾ ಮಲಾರಮನ್ನನ್ ಸೋಮವಾರ ರಾತ್ರಿ ನಿಧನರಾದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಕೊನೆಗೂ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ.
ಲಕ್ಷ್ಮಿ ಹೆಬ್ಬಾಳಕರ ಶೋಕ : ಕಾಂಗ್ರೆಸ್ ಪಕ್ಷದ ಹಿರಿಯ, ನಿಷ್ಠಾವಂತ ನಾಯಕಿಯಾಗಿದ್ದ ಹಾಗೂ ಮಹಿಳಾ ಪರ ಧ್ವನಿ ಎತ್ತುತ್ತಿದ್ದ ಪುದುಚೇರಿ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರೇಮಲತಾ ಮಲಾರಮನ್ನನ್ ಅವರ ನಿಧನದಿಂದ ಮಹಿಳಾ ಕಾಂಗ್ರೆಸ್ ವಿಭಾಗಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮಾಜಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಶೋಕ ವ್ಯಕ್ತಪಡಿಸಿದ್ದಾರೆ. ಪ್ರೇಮಲತಾ ಅವರ ಆತ್ಮಕ್ಕೆ ಭಗವಂತ ಶಾಂತಿಯನ್ನು ನೀಡಲಿ. ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡುವಂತೆ ದೇವರಲ್ಲಿ ಪ್ರಾರ್ಥಿಸುವುದಾಗಿ ಹೆಬ್ಬಾಳಕರ ತಿಳಿಸಿದ್ದಾರೆ. ////

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button