Election NewsKannada NewsKarnataka NewsNationalPolitics

ಜೆಡಿಎಸ್‌ನ 3 ಅಭ್ಯರ್ಥಿಗಳು ಗೆಲ್ಲುತ್ತೇವೆ: ಎಚ್.ಡಿ.ಕುಮಾರಸ್ವಾಮಿ

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನ 3 ಅಭ್ಯರ್ಥಿಗಳು ಜಯಗಳಿಸಲಿದ್ದಾರೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಭ್ಯರ್ಥಿಗಳು ಕನಿಷ್ಠ 20 ಕ್ಷೇತ್ರಗಳಲ್ಲಿ ಜಯ ಗಳಿಸಲಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

Home add -Advt

ಬೆಂ.ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಬರೆದ ಪತ್ರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಕ್ರಮ ಚಟುವಟಿಕೆಗಳನ್ನು ಮಾಡುವುದಲ್ಲಿ ಅವರು ಮಾಸ್ಟರ್‌ಗಳು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈತ್ರಿ ಅಭ್ಯರ್ಥಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆಂದರು.

Related Articles

Back to top button