Latest

*ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು*

ಪ್ರಗತಿವಾಹಿನಿ ಸುದ್ದಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಡುರಸ್ತೆಯಲ್ಲಿಯೇ ಕಾರು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.

Home add -Advt

ಸ್ವಿಫ್ಟ್ ಡಿಸೈರ್ ಕಾರು ಚಿಕ್ಕಮಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿತ್ತು. ದಾರಿ ಮಧ್ಯೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಣಿಸಿಕೊಂಡಿದೆ. ಕಾರಿನಲ್ಲಿದ್ದವರು ತಕ್ಷಣ ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷ್ನಾರ್ಧದಲ್ಲಿ ಕಾರಿನ ತುಂಬ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button