ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಆಯ್ಕೆಯಾಗಿರುವ 99 ಸಂಸದರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ವಕೀಲರೊಬ್ಬರು ದೆಹಲಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಚುನಾವಣೆಯ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಕೆಲ ಉಚಿತ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ ಸಹಾಯಧನ, ನಿರುದ್ಯೋಗಿಗಳಿಗೆ ಸಹಾಯ ಭತ್ಯೆ ಸೇರಿದಂತೆ ಸಾಕಷ್ಟು ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಿಸಿದೆ.
ಈ ರೀತಿ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ 99 ಸಂಸದರು ಆಯ್ಕೆಯಾಗಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿ ವಕೀಲರೊಬ್ಬರು ಕೋರ್ಟ್ ಮೊರೆಹೋಗಿದ್ದಾರೆ.
ಅಲ್ಲದೇ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ಮೂಲಕ ಮತದಾರರಿಗೆ ಲಂಚ ನೀಡುವಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕರು ಮತ್ತು ಪಕ್ಷದ ಸದಸ್ಯರ ವಿರುದ್ಧ ಸೆಕ್ಷನ್ 146, ಆರ್ ಪಿ ಎ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ರಾಷ್ಟ್ರಪತಿಯನ್ನು ಕೂಡ ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ