Latest

*ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ವೇಳೆ ಚಾಕು ಇರಿತ; ಮೂವರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ ಇಬ್ಬರಿಗೆ ಚಾಕು ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ್ ತಾಲೂಕಿನ ಬೋಳಾರ ಬಳಿ ನಡೆದಿದೆ.

ಹರೀಶ್ (41) ಹಾಗೂ ನಂದಕುಮಾರ್ (24) ಗೆ ಚಾಕು ಇರಿಯಲಾಗಿದ್ದು, ಮತ್ತೋರ್ವ ಕೃಷ್ಣಕುಮಾರ್ ಎಂಬಾತನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಕಸಭ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಗೆದ್ದ ಹಿನ್ನೆಲೆ ಹಾಗೂ ನರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಬೆನ್ನಲ್ಲೇ ಬೋಳಾರ ನಲ್ಲಿ ನಿನ್ನೆ ರಾತ್ರಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದರು. ವಿಜಯೋತ್ಸವ ಮೆರವಣಿ ಮಾಡಿದ್ದರು. ಮೆರವಣಿಗೆ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪು ದಳಿ ನಡೆಸಿ ಇಬ್ಬರಿಗೆ ಚಾಕು ಇರಿದಿದೆ.

Home add -Advt

ಪ್ರಕರಣ ದಾಖಲಿಸಿಕೊಂಡಿರುವ ಕೊಣಾಜೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button