ಸ್ಮಾರ್ಟ ಸಿಟಿ ಯೋಜನೆಯಡಿಯಲ್ಲಿ ಸ್ಮಾರ್ಟ ಕ್ಲಾಸ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಅನಿಲ ಬೆನಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದ ಖಂಜರ ಗಲ್ಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಸಿಟಿ ಅನುದಾನದಡಿ ರೂ. ೪೯ ಲಕ್ಷಗಳಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಕಾಮಗಾರಿಗೆ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಭೂಮಿ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ಮಾರ್ಟ ಸಿಟಿ ಅಡಿಯಲ್ಲಿ ಸ್ಮಾರ್ಟ ಕ್ಲಾಸ್‌ಗಳನ್ನು ನಿರ್ಮಿಸಲಾಗುತ್ತಿದೆ. ಈ ಕೊಠಡಿಯು ಹವಾ ನಿಯಂತ್ರಿತ ಕೊಠಡಿಯಿಂದ ಕೂಡಿದ್ದು, ೨೦ ಗಣಕಯಂತ್ರಗಳು, ಸ್ಮಾರ್ಟ್ ಬೋರ್ಡ್, ಎಲ್.ಇ.ಡಿ. ಸ್ಕ್ರೀನ್, ವ್ಯವಸ್ಥಿತ ಖುರ್ಚಿಗಳು ಹಾಗೂ ಇತರೆ ಅತ್ಯಾಧಿನಿಕ ವ್ಯವಸ್ಥೆಯು ಇದರಲ್ಲಿ ಇರುತ್ತದೆ ಎಂದು ತಿಳಿಸಿದರು. ಶಿಕ್ಷಕರು ಇದರ ಉಪಯೋಗವನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಸ್ಮಾರ್ಟ ಸಿಟಿ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ರುಕಯ್ಯ ಹಡಲಗೆ, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ