Belagavi NewsBelgaum NewsKannada NewsKarnataka News

*ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ದೇಶದ ಆರ್ಥಿಕತೆ ಅಭಿವೃದ್ಧಿಗಾಗಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಅಗತ್ಯ*

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಿ: ಪಿ. ಮುರಳಿ ಮೋಹನ್ ರೆಡ್ಡಿ

ಪ್ರಗತಿವಾಹಿನಿ ಸುದ್ದಿ: ಬಾಲ ಕಾರ್ಮಿಕ ಪದ್ಧತಿ ನಿ?ಧ ಕಾಯ್ದೆಯಡಿ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ನಿರಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಹೋಟೆಲ್, ಅಂಗಡಿಗಳಲ್ಲಿ ನಿರಂತರ ದಾಳಿ ನಡೆಸಿ ಮಕ್ಕಳ ರಕ್ಷಣೆಗೆ ಮುಂದಾಗಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಮುರಳಿ ಮೋಹನ್ ರೆಡ್ಡಿ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಬೆಳಗಾವಿ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ (ಜೂ.೧೨) ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ತಮ್ಮ ಜೀವವನೇ ಕಳೆದುಕೊಳ್ಳುತ್ತಿದ್ದಾರೆ. ಭವಿಷ್ಯದಲ್ಲಿ ಭಾರತ ಎಲ್ಲ ಕ್ಷೇತ್ರಗಳಲ್ಲಿ ಪ್ರಬಲರಾಗಲು ಮಕ್ಕಳು ಮುಂದೆ ಉತ್ತಮ ಪ್ರಜೆಗಳಾಗಬೇಕು. ಈ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪ್ರತಿ ಮಕ್ಕಳ ಕುರಿತು ಮಾಹಿತಿ ಇರುತ್ತದೆ. ಬಡತನದಿಂದ ಶಿಕ್ಷಣ ವಂಚಿತರಾಗುತ್ತಿರುವ ಮಕ್ಕಳನ್ನು ಗುರುತಿಸಬೇಕು. ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಇಂತಹ ಮಕ್ಕಳು ಸಿಗುತ್ತಾರೆ. ಗ್ರಾಮೀಣ ಭಾಗದಲ್ಲಿ ಶಿಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪ್ರತಿಯೊಬ್ಬರೂ ಇಂತಹ ಮಕ್ಕಳನ್ನು ಗುರುತಿಸಿ ರಕ್ಷಿಸಬೇಕು ಎಂದು ಪಿ.ಮುರಳಿ ಮೋಹನ್ ರೆಡ್ಡಿ ಅವರು ತಿಳಿಸಿದರು.ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ದೇಶದ ಆರ್ಥಿಕತೆ ಅಭಿವೃದ್ಧಿಗಾಗಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಅಗತ್ಯ

ಮಕ್ಕಳ ರಕ್ಷಣೆ, ದೇಶದ ರಕ್ಷಣೆ:
ಸಾರ್ವಜನಿಕರಿಗೆ ಅರಿವು ಮೂಡಿಸಲು, ಬಾಲ ಕಾರ್ಮಿಕರ ನಿರ್ಮೂಲನೆ ಕುರಿತು ಪ್ರತಿಯೊಬ್ಬರಿಗೂ ತಿಳಿಸುವ ಉದ್ದೇಶದಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲು ನಿರ್ಧರಿಸಲಾಯಿತು. ಬಾಲ ಕಾರ್ಮಿಕರು ತಮ್ಮ ಹಕ್ಕುಗಳು ಇಲ್ಲದೆ ತಮ್ಮ ಜೀವನವನದ ಮೌಲ್ಯವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದಿದ್ದಾರೆ. ಅವೆಲ್ಲವನ್ನೂ ತಡೆಗಟ್ಟುವ ನಿಟ್ಟಿನಲ್ಲಿ ಈ ದಿನ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತ ನಾಗೇಶ್ ಡಿ.ಜಿ ಅವರು ಹೇಳಿದರು.
ಭಾರತದಲ್ಲಿ ಸಾಕಷ್ಟು ಮಕ್ಕಳು ತಮ್ಮ ಶಿಕ್ಷ ಣದ ಹಕ್ಕು, ಆರೋಗ್ಯ ಮತ್ತು ಮೂಲಭೂತ ಸ್ವಾತಂತ್ರ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಮಕ್ಕಳಲ್ಲಿ, ಅರ್ಧಕ್ಕಿಂತ ಹೆಚ್ಚು ಬಾಲ ಕಾರ್ಮಿಕರು ಕಾನೂನು ಬಾಹಿರ ಚಟುವಟಿಕೆಗಳಿಗೆ ತೊಡಗಿಕೊಳ್ಳುತ್ತಿದ್ದಾರೆ.

ಅಪಾಯಕಾರಿ ಪರಿಸರದಲ್ಲಿ ಕೆಲಸ, ಗುಲಾಮಗಿರಿ ಅಥವಾ ಬಲವಂತವಾಗಿ ಕೆಲಸ ಮಾಡುತ್ತಾರೆ. ಜೊತೆಗೆ ವೇಶ್ಯಾವಾಟಿಕೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಸಶಸ್ತ್ರ ಸಂಘ?ಕ್ಕೆ ಬಲಿಯಾಗುತ್ತಿದ್ದಾರೆ. ಭಾರತ ಸಂವಿಧಾನ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು ಎಂದು ತಿಳಿಸಿದೆ. ಭಾರತದಲ್ಲಿ ಬಾಲ, ಕಿಶೋರ ಕಾರ್ಮಿಕ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆಯನ್ನು ಈಗಾಗಲೇ ದೇಶದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿರುವ ಮಕ್ಕಳು ಕಂಡು ಬಂದಲ್ಲಿ ತಕ್ಷಣ ರಕ್ಷಣೆ ಮಾಡಲಾಗುತ್ತಿದೆ.

ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಆಚರಣೆ ಜೊತೆಗೆ ನಿರಂತರವಾಗಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿ ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಇಲಾಖೆಗಳು, ಸಾರ್ವಜನಿಕರು ಸೇರಿಯಂತೆ ಎಲ್ಲರೂ ಕೈ ಜೋಡಿಸಬೇಕು ಎಂದು ಉಪ ಕಾರ್ಮಿಕ ಆಯುಕ್ತ ನಾಗೇಶ್ ಡಿ.ಜಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆರ್. ನಾಗರಾಜ್ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಮಕ್ಕಳನ್ನು ಗುರುತಿಸಿ ರಕ್ಷಣೆ ಮಾಡಲಾಗುತ್ತಿದೆ. ಮೊದಲ ಕಾಲದಿಂದಲೂ ಜಿತ ಪದ್ಧತಿ ಹಾಗೂ ಬಾಲ ಕಾರ್ಮಿಕ ಪದ್ಧತಿ ಇತ್ತು. ಈಗ ಕಾಲ ಬದಲಾಗಿದೆ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲಾಗಿದೆ. ಆದರೆ ಇನ್ನ? ಜಾಗೃತಿ ಕಾರ್ಯಕ್ರಮಗಳು ಅಗತ್ಯವಿದ್ದು, ಈ ಮೂಲಕ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಮುರಳಿ ಮೋಹನ್ ರೆಡ್ಡಿ ಅವರು ಬಾಲ ಕಾರ್ಮಿಕರ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಮಿಕ ಇಲಾಖೆ ಆಯುಕ್ತ ಎಂ.ಬಿ ಅನ್ಸಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನಕುಮಾರ ಹಂಚಾಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶಿವಪ್ರಿಯ ಕಡೆಚೂರ, ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹಾಂತೇಶ ಭಜಂತ್ರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಮಹಾನಗರ ಪಾಲಿಕೆ ಉಪಆಯುಕ್ತರಾದ ಉದಯಕುಮಾರ ತಳವಾರ, ಬೆಳಗಾವಿ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ್ ಜೋಗುರು, ತರುನ್ನಂ ಬೆಂಗಾಲಿ, ಮಹಿಳಾ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂರ್ದ ಮೇರಿ, ಜಿಲ್ಲಾ ನ್ಯಾಯವಾದಿಗಳ ಸಂಘ ಅಧ್ಯಕ್ಷ ಎಸ್.ಎಸ್ ಕಿವುಡಸಣ್ಣವರ, ಹಿರಿಯ ಕಾರ್ಮಿಕ ನಿರೀಕ್ಷರಾದ ಮಂಜುನಾಥ, ಸಂಜು ಭೋಸಲೆ, ರಮೇಶ, ರಾಜೇಶ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಾಲ ಕಾರ್ಮಿಕರ ಯೋಜನೆಯ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ಅವರು ನಿರೂಪಿಸಿ, ವಂದಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button