ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ ಶುರುವಾಗಿದೆ.
ಪೊಕ್ಸೋ ಕೇಸ್ ನಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಜರಾಗುವಂತೆ ನೋಟಿಸ್ ನೀಡಿದರೂ ಯಡಿಯೂರಪ್ಪ ವಿಚರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಸಿದ್ಧತೆ ನಡೆಸಿದೆ. ಅರೆಸ್ಟ್ ವಾರೆಂಟ್ ಜಾರಿಮಾಡುವಂತೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವಿಚಾರವಾಗಿ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಅವರು ಒಂದು ನೋಟಿಸ್ ಗೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪೋಕ್ಸೋ ಪ್ರಕರಣ ಸಂಬಂಧ ಜೂನ್ 15ರೊಳಗೆ ಚಾರ್ಜ್ ಶೀಟ್ ಸಲ್ಲಿಸಬೇಕು. ಹೀಗಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಅಗತ್ಯ ಬಿದ್ದರೆ ಸಿಐಡಿಯವರು ಯಡಿಯೂರಪ್ಪ ಅವರನ್ನು ಬಂಧಿಸುತ್ತಾರೆ. ಈ ಬಗ್ಗೆ ನಾನು ಏನೂ ಹೇಳಲಾಗದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ