Politics

*ಮಾಜಿ ಸಿಎಂ ಯಡಿಯೂರಪ್ಪಗೆ ವಾರೆಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.

ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಂಧನ ವಾರೆಂಟ್ ಜಾರಿ ಮಾಡಿದ್ದು, ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಬಂಧನ ವಾಗುವ ಸಾದ್ಯತೆ ಇದೆ.

ಕೆಲ ದಿನಗಳ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಮಹಿಳೆಯೊಬ್ಬರು ತನ್ನ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಅಡಿ ಎಫ್ ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ದೂರುದಾರ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಇದೇ ವೇಳೆ ಬಂಧನ ಭೀತಿಯಲ್ಲಿದ್ದ ಮಾಜಿ ಸಿಎಂ ಯಡಿಯೂರಪ್ಪ ತನ್ನ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಸಿಐಡಿ ವಿಚಾರಣೆಗೆ ಜೂನ್ 17ರಂದು ಹಾಜರಾಗುವುದಾಗಿ ತಿಳಿಸಿದ್ದರು. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ವಾರೆಂಟ್ ಜಾರಿಗೆ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯ ಯಡಿಯೂರಪ್ಪ ವಿರುದ್ಧ ವಾರೆಂಟ್ ಜಾರಿ ಮಾಡಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button