ಪ್ರಗತಿವಾಹಿನಿ ಸುದ್ದಿ: ಅರ್ಜಿ ವಿಲೇವಾರಿ ಮಾಡಲು ಲಂಚ ಕೇಳಿದ್ದ ಅಧಿಕಾರಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ತಹಶೀಲ್ದಾರರ ಕಛೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಯನ್ನು ತಹಶೀಲ್ದಾರರ ಕಛೇರಿಯ ಶಿರಸ್ತೇದಾರ್ ಸುನೀಲ್ ಕುಮಾರ್ ಕುಲಕರ್ಣಿ ಎಂದು ಗುರುತಿಸಲಾಗಿದೆ.
ಸುನೀಲ್ ಕುಮಾರ್ ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ, ಗಬೂರು ಗ್ರಾಮದ ನಿವಾಸಿ ಕರಿಯಪ್ಪ ಎನ್ನುವವರು ಯೋಜನಾ ನಿರಾಶ್ರಿತ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು ಅರ್ಜಿ ವಿಲೇವಾರಿ ಮಾಡಲು ₹50 ಸಾವಿರ ಕುಲಕರ್ಣಿ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಅದರಂತೆಯೇ ಮುಂಗಡವಾಗಿ 37 ಸಾವಿರ ರೂಪಾಯಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸುನೀಲ್ ಬಲೆಗೆ ಬಿದ್ದಿದ್ದಾರೆ. ಸದ್ಯ ಬಂಧಿತ ಆರೋಪಿಯ ವಿರುದ್ಧ ದೂರು ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ