ಪ್ರಗತಿವಾಹಿನಿ ಸುದ್ದಿ: ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ದಕ್ಷಿಣ ಒಳನಾಡಿನ ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವೆಡೆ ಚದುರಿದಂತೆ ಮಧ್ಯಮ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಹಲವೆಡೆ ಭಾರೀ ಮಳೆಯಾಗಲಿದೆ. ಇನ್ನು, ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ