ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಅಗತ್ಯವಿದ್ದರೆ ಬಂಧಿಸುತ್ತಾರೆ. ಇದನ್ನು ಹೇಳಲು ಆಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ಈ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಜೂನ್ 15ರ ಒಳಗೆ ಚಾರ್ಜ್ ಶೀಟ್ ಮಾಡಬೇಕು ಎಂದು ಇದೆ, ಇದಕ್ಕೆಲ್ಲ ಅವರೇ ಉತ್ತರಿಸಬೇಕು. ನಾನು ಅವರನ್ನು ಬಂಧಿಸಿ ಎಂದು ಹೇಳಲು ಸಾಧ್ಯವಿಲ್ಲ ಎಂದು ಪರಂ ಹೇಳಿದ್ದಾರೆ.
ಇನ್ನೂ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು, ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ಗ್ರಾಮದಲ್ಲಿ ಪಿಡಿಓ ವಾಟರ್ ಮ್ಯಾನ್ ರನ್ನ ಅಮಾನತು ಮಾಡಲಾಗಿದೆ ಎಂದರು.
ಪೈಪ್ ಒಡೆದ ಕಾರಣ ಕಲುಷಿತ ನೀರು ಮಿಶ್ರಣ ಆಗಿ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನೂ ಲ್ಯಾಬ್ ನ ವರದಿ ಬರಬೇಕಾಗಿದೆ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ