ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಎನ್ ಟಿಎ ಗೆ ನ್ಯಾಯಾಲಯ ಸೂಚನೆ ನೀಡಿದೆ. ನಿನ್ನೆ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಕೇಂದ್ರ ಸರ್ಕಾರ 1563 ಅಭ್ಯರ್ಥಿಗಳಿಗೆ ನೀಡಿದ್ದ ಗ್ರೇಸ್ ಅಂಕ ಹಿಂಪಡೆಯುವುದಾಗಿ ಹೇಳಿತ್ತು. ಅಲ್ಲದೇ ಜೂನ್ 23ರಂದು ಮರು ಪರೀಕ್ಷೆಗೆ ಅವಕಾಶ ನೀಡುವುದಾಗಿ ತಿಳಿಸಿತ್ತು.
ಇದರ ಬೆನ್ನಲ್ಲೇ ಎನ್ ಟಿಎ ಕೂಡ 1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಮರು ಪರೀಕ್ಷೆ ಫಲಿತಾಂಶವನ್ನು ಜೂನ್ 30ರಂದು ಪ್ರಕಟಿಸುವುದಾಗಿ ತಿಳಿಸಿದೆ. ಜುಲೈ 6ರಂದು ಆರಂಭವಾಗುವ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅಡ್ದಿಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ