Belagavi NewsBelgaum News

*ಟಿಪ್ಪರ್- ಕಾಲೇಜು ಬಸ್ ಅಪಘಾತ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಭೂತರಾಮನಹಟ್ಟಿಯ ಕಿರು ಮೃಗಾಲಯದ ಎದುರು ನಡೆದಿದೆ.

Home add -Advt

ಕೊಲ್ಹಾಪುರದಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಧಾರವಾಡ ವಿಶ್ವವಿದ್ಯಾಲಯ ನೋಡಿಕೊಂಡು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಮೀಪ ಇರುವ ರಾಣಿ ಚನ್ನಮ್ಮ‌ ಕಿರು ಮೃಗಾಲಯಕ್ಕೆ ಭೇಟಿ ನೀಡಿ ಮರಳಿ ಕೊಲ್ಲಾಪುರಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಬೆಳಗಾವಿ ‌ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌.


Related Articles

Back to top button