Belagavi NewsBelgaum NewsKannada NewsKarnataka NewsPolitics

ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಖಂಡನೀಯ: ಎಫ್.ಎಸ್.ಸಿದ್ದನಗೌಡರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಗೆಲವು ಸಾಧಿಸುವ ಉದ್ದೇಶದಿಂದ ಮುಂದಾಲೋಚನೆ ಇಲ್ಲದೆ ಬಿಟ್ಟಿ ಭಾಗ್ಯಗಳನ್ನ ಘೋಷಿಸಿ ಇಂದು ಜನಸಾಮನ್ಯರ ಮೇಲೆ ತೆರೆಗೆ ಹೊರೆ ಹೊರೆಸಿ ಒಂದುಕಡೆ ಕೊಟ್ಟಾಂಗ ಇನ್ನೊಂದು ಕಡೆಯಿಂದ ದುಪ್ಪಟ್ಟು ವಸೂಲಿ ಮಾಡುವ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿ ಖಂಡನೀಯ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ‌ ಸದಸ್ಯ ಎಫ್.ಎಸ್.ಸಿದ್ದನಗೌಡರ ಡಿಸೈಲ್ ಮತ್ತು ಪೆಟ್ರೋಲ ದರ ಏರಿಕೆಯನ್ನು ಉಗ್ರವಾಗಿ ಖಂಡಿಸಿದ್ದಾರೆ.

 ಶನಿವಾರ ಪತ್ರಿಕಾಪ್ರಕಟಣೆ ಹೊರಡಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ್ ಬಂದಾಗಿನಿಂದ ಬರಗಾಲವಿದ್ದರು ರೈತರಿಗೆ ಸಾಹಯ ಮಾಡದೆ ಕಿಸಾನ್ ಸಮ್ಮಾನದ ರಾಜ್ಯ ಸರ್ಕಾರದ 4ಸಾವಿರ ರೂಪಾಯಿ ಸಾಹಯಧನ ಕಿತ್ತುಕೊಂಡರು. ಕಂದಾಯ ಮತ್ತು ಮುದ್ರಾಂಕ ಶುಲ್ಕವನ್ನು ಹೆಚ್ಚಿಸುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿತ್ತು. ಮಕ್ಕಳ ರೈತವಿದ್ಯಾಸಿರಿ ಕಸಿದುಕೊಂಡು ಬಿತ್ತನೆ ಬೀಜದ ದರ ದುಪ್ಪಟ್ಟು ಮಾಡಿ ರೈತರ ಜೀವನದ ಮೇಲೆ‌ ಬರೆ ಎಳೆದ ಸರ್ಕಾರ ಇಂದು ಡಿಸೈಲ್ ಬೆಲೆಯನ್ನು 3ರೂ.50ಪೈಸೆ ಹಾಗೂ ಪೆಟ್ರೋಲ್ ದರ 3.ರೂಪಾಯಿ ಹೆಚ್ಚಳ ಮಾಡಿರುವದು ಖಂಡನೀಯವಾಗಿದೆ. ಪೆಟ್ರೋಲ್ ಮತ್ತು ಡಿಸೈಲ್ ಬೆಲೆ ಏರಿಸುವ ಮೂಲಕ ಎಲ್ಲಾ ವಸ್ತುಗಳ ಹಾಗೂ ಸೇವೆಯ ಬೆಲೆ ಏರಿಕೆಗೆ ಹಾದಿ ಮಾಡಿಕೊಟ್ಟ ಕಾಂಗ್ರೆಸ್ ಸರ್ಕಾರ ತನ್ನ ಬೆಲೆ ಏರಿಕೆಯ ನೀತಿಯಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ನಡೆಸಬೆಕಾದೀತು. ಜನರ ಅಕ್ರೋಶವನ್ನು ಎದುರಿಸಬೇಕೆಂದು‌ ಎಚ್ಚರಿಕೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button