Latest

*ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. 

ರಾಜು ಅಲಿಯಾಸ್ ಧನರಾಜ್ ಬಂಧಿತ ಆರೋಪಿಯಾಗಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರೇಣುಕಸ್ವಾಮಿ ಕೊಲೆಯಾದ ಬಳಿಕ ರಾಜು ತಲೆಮರೆಸಿಕೊಂಡಿದ್ದ. ಪ್ರಕರಣದಲ್ಲಿ ಈತ 9ನೇ ಆರೋಪಿ ಆಗಿದ್ದ. ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದಾಗ ಆರೋಪಿ ನಂದೀಶ್ ಜೊತೆಗೆ ಸೇರಿ ‌ರಾಜು ಎಲೆಕ್ಟ್ರಿಕ್ ಶಾಕ್ ನೀಡಿದ್ದ. ಮೆಗ್ಗರ್ ಸಾಧನ‌‌ ಬಳಸಿ ರೇಣುಕಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಲಾಗಿತ್ತು. ಈತನಿಂದ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಸಾಧನ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

Related Articles

Back to top button