Kannada NewsKarnataka NewsLatestNationalPolitics

*ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು, ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8,500 ರೂ.ಗಳನ್ನು ವರ್ಗಾಯಿಸುವ ಭರವಸೆಯನ್ನು ಈಡೇರಿಸದ ನಂತರ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ ದರವನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಟೀಕಿಸಿದ್ದಾರೆ.

ಈ ನಿರ್ಧಾರದ ನಂತರ ಇಂಧನ ಬೆಲೆಗಳು ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳ ಮೇಲೆ ನೇರವಾಗಿ ಪರಿಣಾಮ ಬೀರುವುದರಿಂದ ಕರ್ನಾಟಕದ ಜನರು ಆಹಾರ ಪದಾರ್ಥಗಳು, ಬಟ್ಟೆ, ಔಷಧಿಗಳು ಮತ್ತಿತರ ಎಲ್ಲಾ ಮೂಲಭೂತ ವಸ್ತುಗಳಿಗೆ ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಚುನಾವಣೆ ಮುಗಿದ ನಂತರ ಸರ್ಕಾರದ ಇಂತಹ ನಿರ್ಧಾರ ಕಾಂಗ್ರೆಸ್ ನ ಹೈಪೋಕ್ರಿಸಿಯನ್ನು ಬಹಿರಂಗಪಡಿಸಿದೆ. ಇದರೊಂದಿಗೆ ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗಿರುವುದಾಗಿ ಅವರು ಹೇಳಿದ್ದಾರೆ.

ಯುರೋಪಿನಲ್ಲಿನ ಯುದ್ಧದಿಂದಾಗಿ ಜಗತ್ತು ಇಂಧನ ಬೆಲೆ ಏರಿಕೆಯನ್ನು ಎದುರಿಸುತ್ತಿರುವ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾದ ಏಕೈಕ ದೇಶವಾಗಿ ಭಾರತ ಉಳಿದಿದೆ ಎಂಬುದನ್ನು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಖಾತ್ರಿಪಡಿಸಿದೆ ಎಂದು ಪುರಿ ಅವರು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button