Film & EntertainmentKannada NewsKarnataka NewsLatest

*ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಜೈಲುಪಾಲು*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ 13 ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಆರೋಪಿಗಳನ್ನು ಮ್ಯಾಜಿಸ್ಟ್ರ‍ೇಟ್ ಕೋರ್ಟ್ ಗೆ ಹಾಜರು ಪಡಿಸಿದ್ದರು.

ಈ ವೇಳೆ ಪವಿತ್ರಾಗೌಡ, ಪವನ್, ವಿನಯ್, ಪ್ರದೋಶ್, ನಾಗರಾಜ್, ಲಕ್ಷ್ಮಣ್ ಸೇರಿದಂತೆ 7 ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ನಟ ದರ್ಶನ್ ಸೇರಿ 6 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button