ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-3 ನಡೆಯುವ ಹಿನ್ನೆಲೆಯಲ್ಲಿ ಸಿ.ಆರ್.ಪಿ.ಸಿ. 1973 ಕಲಂ 144 ರನ್ವಯ ಜೂನ್ 24 ರಿಂದ ಜುಲೈ 5ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷೆ ನಡೆಯಯವ 23 ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಟಿ.ಇ.ಟಿ. ಪರೀಕ್ಷೆ ಹಿನ್ನೆಲೆ ನಿಷೇಧಾಜ್ಞೆ ಜಾರಿ
ಕೆ.ಎ.ಆರ್-ಟಿ.ಇ.ಟಿ. ಪರೀಕ್ಷೆಗಳನ್ನು ಸುಗಮವಾಗಿ ಜರುಗಿಸುವ ಹಿನ್ನೆಲೆಯಲ್ಲಿ ಜೂನ್ 30 ಎಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 4-30 ಗಂಟೆವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ, ಈ ಕೆಳಗಿನ ಚಟುವಟಿಕೆಗಳನ್ನು ಪ್ರತಿಬಂಧಿಸಿ ಆಜ್ಞೆ ಹೊರಡಿಸಿಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಅದೇಶ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ