Kannada NewsKarnataka NewsNationalPolitics

ಎಸ್‌ಐಟಿ ತನಿಖೆ ನಡೆಸುತ್ತಿದೆ ಆದರೆ ಸಿಬಿಐ ಬಗ್ಗೆ ತಿಳಿದಿಲ್ಲ: ಗೃಹ ಸಚಿವ ಪರಮೇಶ್ವರ್

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ.ಗಳ ಹಗರಣ ನಡೆದಿದ್ದು ಅದನ್ನು ನಮ್ಮ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ ಸಿಬಿಐ ವಿಚಾರ ಏನು ಎಂದು ತಿಳಿದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ವಾಲ್ಮೀಕಿ ನಿಗಮದ ಹಗರಣದ ಬ್ಯಾಂಕಿಂಗ್‌ ತನಿಖೆಯನ್ನು ಸಿಬಿಐ ಮಾಡುತ್ತಿದೆ. ಆದರೆ ಈವರೆಗೂ ನಮ್ಮನ್ನು ಯಾವ ಸಿಬಿಐ ಅಧಿಕಾರಿಗಳು ಸಂಪರ್ಕಿಸಿಲ್ಲ ಎಂದಿದ್ದಾರೆ

ನಿಗಮದ ಹಗರಣ ಸಂಬಂಧ ಬಳ್ಳಾರಿ ಶಾಸಕ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ನಿಗಮದಲ್ಲಿ ಭಾರಿ ಹಗರಣವಾಗಿದೆ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಈ ಹಗರಣದಲ್ಲಿ 187 ಕೋಟಿ ರೂ.ಗಳನ್ನು ತೆಲಂಗಾಣ ರಾಜ್ಯಕ್ಕೆ ರವಾನಿಸಲಾಗಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

ಹಗರಣ ಬಹಿರಂಗವಾಗುತ್ತಿದ್ದಂತೆ ರಾಜ್ಯಸರ್ಕಾರವೂ ಪ್ರತ್ಯೇಕ ಎಸ್ಐಟಿ ತಂಡವನ್ನು ರಚಿಸಿ ತನಿಖೆಗೆ ಆದೇಶಿಸಿತ್ತು. ಈ ನಡುವೆ ನಿಗಮದಿಂದ ಸಿಬಿಐನಲ್ಲಿ ದೂರು ದಾಖಲಾಗಿಸಲಾಗಿತ್ತು.

ಬ್ಯಾಂಕ್‌ ದಾಖಲಿಸಿದ ದೂರಿನ್ವಯ ಬ್ಯಾಂಕ್‌ ವ್ಯವಹಾರಕ್ಕೆ ಸಂಬಂಧ ಪಟ್ಟಂತೆ ಸಿಬಿಐ ನಮ್ಮನ್ನು ಇನ್ನು ಸಂಪರ್ಕಿಸಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದರ್ಶನ ಪ್ರಕರಣದಲ್ಲಿ ಯಾರು ಹಸ್ತಕ್ಷೇಪ ಮಾಡಿಲ್ಲ. ಪೊಲೀಸರು ತಮ್ಮ ಕೇಲಸ ಮಾಡುತ್ತಾರೆ. ಈ ಪ್ರಕರಣದಲ್ಲಿ ಯಾರು ಹಸ್ತಕ್ಷೇಪ ಮಾಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.‌

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button