ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಕಸ್ತೂರು ಗೇಟ್ ಬಳಿ ನಡೆದಿದೆ.
ದಂಪತಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ 3 ವರ್ಷದ ಮಗು ಸಾವನ್ನಪ್ಪಿದೆ. ಧನ್ವಿತ್ (3) ಮೃತ ಮಗು. ಮಗುವಿನ ತಂದೆ ಆಂಜನೇಯ ಹಾಗೂ ತಾಯಿ ಮಮತಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ