Kannada NewsKarnataka NewsNationalPolitics

*ಕೇಂದ್ರ ಕೃಷಿ ಸಚಿವರೊಂದಿಗೆ ವಿಡಿಯೋ ಸಂವಾದ: ರಾಜ್ಯದ ಯೋಜನೆಗಳಿಗೆ  ಸಹಕಾರ ನೀಡಲು ಎನ್. ಚಲುವರಾಯಸ್ವಾಮಿ ಮನವಿ*

ಪ್ರಗತಿವಾಹಿನಿ ಸುದ್ದಿ: ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಇಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರವರು ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿತೆ  ನಡೆಸಿದ  ವಿಡಿಯೋ ಸಂವಾದದಲ್ಲಿ‌ ಪಾಲ್ಗೊಂಡು ರಾಜ್ಯದ ಯೋಜನೆಗಳಿಗೆ ಸಂಪೂರ್ಣ ಸಹಕಾರ ಕೋರಿದರು.

Home add -Advt

ಇದೇ ವೇಳೆ ಅವರು ರಾಜ್ಯದ ಮಳೆ ಬೆಳೆ, ಹಾಗೂ  ರೈತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು‌‌. ಕರ್ನಾಟಕವು ದೇಶದ ದ್ವಿದಳ ಧಾನ್ಯ ಬೆಳೆಯ ಶೇ 11 ರಷ್ಟು ಭೂ ಪ್ರದೇಶ ಮತ್ತು ಶೇ 8 ರಷ್ಟು ಉತ್ಪಾದನೆ ಹೊಂದಿದೆ. ರಾಜ್ಯದ 31.6 ಲಕ್ಷ  ಹೆಕ್ಟೇರ್ ಪ್ರದೇಶದಲ್ಲಿ 19.83 ಲಕ್ಷ ಟನ್ ದ್ವಿದಳ ಧಾನ್ಯ ಬೆಳೆಯಲಾಗುತ್ತಿದೆ ಎಂದು ಎನ್ . ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ತೊಗರಿ ಬೇಳೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು ಶೇ 31 ರಷ್ಟು  ಕೊಡುಗೆ ನೀಡುತ್ತಿದೆ ಎಂದು ಅವರು ವಿವರಿಸಿದರು. ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಎರಡನ್ನೂ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು ಇದರಿಂದ ಬೇಳೆ ಕಾಳುಗಳ ಆಮದು ಅವಲಂಬನೆ ತಪ್ಪಿಸಲು ಸಹಾಯಕವಾಗುತ್ತದೆ ಎಂದು ರಾಜ್ಯ ಕೃಷಿ ಸಚಿವರು ಮನವರಿಕೆ ಮಾಡಿಕೊಟ್ಟರು.

ಪ್ರಸಕ್ತ ವರ್ಷ 2024-25 ತೊಗರಿ ಬೇಳೆ ಉತ್ಪಾದನೆ ಪ್ರದೇಶವನ್ನು 2 ಲಕ್ಷ ಹೆಕ್ಟೇರ್ ನಷ್ಟು ಹೆಚ್ಚಿಳ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು. ರಾಜ್ಯದ  64.2 ಕೋಟಿ ರೂ ಮೊತ್ತದ   ತೊಗರಿ ಬೇಳೆ ಅಭಿವೃದ್ಧಿಯ ಹೆಚ್ಚುವರಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಕೃಷಿ  ಸಚಿವರಿಗೆ ವಿಶೇಷ ಧನ್ಯವಾದ ಸಮರ್ಪಿಸಿದ ಅವರು ಶೀಘ್ರದಲ್ಲೇ ವೈಯಕ್ತಿಕವಾಗಿ ಬೇಟಿ ಮಾಡುವುದಾಗಿ ತಿಳಿಸಿ ಮುಂದೆಯೂ ನಿರಂತರ ಸಹಕಾರಕ್ಕೆ ಮನವಿ ಮಾಡಿದರು.

Related Articles

Back to top button