*ನಾಳೆ ರಾಜ್ಯಾದ್ಯಂತ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು ಜಿಲ್ಲೆ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಉಡುಪಿ, ಚಾಮರಾಜನಗರ ಮತ್ತು ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು ಮತ್ತು ಹಾಸನ ಜಿಲ್ಲೆಯ ಬಹುತೇಕ ಭಾಗದಲ್ಲಿ ಭರ್ಜರಿ ಮಳೆ ಆಗಲಿದೆ. ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗೆ ಭರ್ಜರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ
ವಿಜಯಪುರ ಮತ್ತು ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ ಮತ್ತು ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಲಿದೆ. ಹೀಗಾಗಿ ಭಾರಿ ಮಳೆಯ ಪರಿಣಾಮ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಹೋರತಾಗಿಯು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯ ಭರ್ಜರಿ ಅಬ್ಬರ ತೋರಿಸಲಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.
ರಾಜ್ಯದ 10 ಜಿಲ್ಲೆಗಳಿಗೆ ಶನಿವಾರ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಭಾನುವಾರ 13 ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ