National

*ಕಳ್ಳಭಟ್ಟಿ ಸಾರಾಯಿ ದುರಂತ: ಸಾವಿನ ಸಂಖ್ಯೆ 54ಕ್ಕೆ ಏರಿಕೆ; ದೃಷ್ಟಿ ಕಳೆದುಕೊಂಡ 10 ಜನರು*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಕಲ್ಲುಕುರುಚಿಯಲ್ಲಿ ಅಕ್ರಮ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.

ಕಲ್ಲುಕುರುಚಿ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಮಹಿಳೆಯರು ಸೇರಿ ಈವರೆಗೆ ಒಟ್ಟು 54 ಜನರು ಸಾವನ್ನಪ್ಪಿದ್ದಾರೆ. 10 ಜನರು ಕಣ್ಣು ಕಳೆದುಕೊಂಡು ಅಂಧರಾಗಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿ 100ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ಮುಂದುವರೆದಿದೆ. 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಗೈದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿವ ಸಾಧ್ಯತೆ ಇದೆ. ಪ್ರಕರಣವನ್ನು ತಮಿಳುನಾಡು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಈಗಗಾಲೇ ನಾಲ್ವರು ಆರೋಪಿಗಳನ್ನು ಬಧಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button