Karnataka News

*ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಯತ್ನ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

ಬಹಿರ್ದೆಸೆಗೆಂದು ಹೋಗಿದ್ದ 17 ವರ್ಷದ ಬಾಲಕಿಯನ್ನು ಎಳೆದೊಯ್ದು ಪೊದೆಯೊಂದರಲ್ಲಿ ಅತ್ಯಾಚಾರವೆಸಗಿ ಕೃತ್ಯದ ಬಳಿಕ ಕಲ್ಲಿನಿಂದ ಜಜ್ಜಿ ಆಕೆಯನ್ನು ಹತ್ಯೆ ಮಾಡಲು ಆರೋಪಿ ಯತ್ನಿಸಿದ್ದ.

ರಾಯಚೂರು ಜಿಲ್ಲೆಯ ಲಿಂಗಸಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಬಸವರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button