EducationKannada NewsKarnataka NewsLatest

*ವಿವಾಹಿತ ಪುರುಷನೊಂದಿಗೆ ಕೆರೆಗೆ ಹಾರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಮಾವತ್ತೂರು ಕೆರೆಗೆ ಹಾರಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. 

Home add -Advt

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ (19) ಎಂಬ ವಿಧ್ಯಾರ್ಥಿನಿ ರಂಗಶಾಮಣ್ಣ (50) ಎಂಬುವವರನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ಯುವತಿ ಪ್ರೇಮಕ್ಕೆ ಕುಟುಂಬದವರ ವಿರೋಧಿಸಿದ ಕಾರಣ ಪ್ರಿಯಕರನ ಜೊತೆ ಕಾರಿನಲ್ಲಿ ಕಳೆದ ಮೂರು ದಿನಗಳ ಹಿಂದೆ ಓಡಿಹೋಗಿದ್ದರು. 

ಇಬ್ಬರು ನಾಪತ್ತೆಯಾಗಿರುವ ವಿಷಯ ಮನೆಯಲ್ಲಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ತೀವ್ರ ಶೋಧ ನಡೆಸಿದ್ದಾರೆ. ಆದರೆ ಇಂದು ಮಾವತ್ತೂರು ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿ, ಕಾರು ಸೇರಿದಂತೆ ಮೊಬೈಲ್ ಪತ್ತೆಯಾಗಿದ್ದು, ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. 

ಸದ್ಯ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಈಜು ಪಟುಗಳಿಂದ ಕೆರೆಯಲ್ಲಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. 

Related Articles

Back to top button