ಪ್ರಗತಿವಾಹಿನಿ ಸುದ್ದಿ: ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾರನ್ನು ಅಮಾನತುಮಾಡಿ ಆದೇಶ ಹೊರಡಿಸಲಾಗಿದೆ. ಬಜರಂಗ್ ಪುನಿಯಾ ಈ ಹಿಂದೆಯೂ ಸಸ್ಪೆಂಡ್ ಆಗಿದ್ದರು.
ಒಲಂಪಿಕ್ ಕಂಚಿನ ಪದಕ ವಿಜೇತರಾಗಿರುವ ಕುಸ್ತಿಪಟು ಬಜಂರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನಾ ಮದ್ದು ನಿಯಂತ್ರಣ ಸಂಸ್ಥೆ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಏಪ್ರಿಲ್ ನಲ್ಲಿ ಬಜರಂಗ್ ಪುನಿಯಾಗೆ ಡೋಪಿಂಗ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ನಾಡಾ ನೋಟಿಸ್ ನೀಡಿತ್ತು. ಪ್ರಕರಣ ಸಂಬಂಧ ಇದೀಗ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ