Politics

*ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.

Home add -Advt

ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್, ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ಕಾಲ ಅಂದರೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

Related Articles

Back to top button