EducationKannada NewsKarnataka News

*SSLC ಫಲಿತಾಂಶ ಕಡಿಮೆಗೆ ಕಾರಣರಾದ ಶಿಕ್ಷಕರಿಗೆ ವಾರ್ಷಿಕ ಬಡ್ತಿ ತಡೆಹಿಡಿಯಲು ಆದೇಶ* 

ಪ್ರಗತಿವಾಹಿ‌ನಿ ಸುದ್ದಿ: ಎಲ್ಲಾ ರೀತಿಯ ಸವಲತ್ತು ನೀಡಿದರು ಎಸ್.ಎಸ್.ಎಲ್.ಸಿ ಪರೀಕ್ಷೆ-1 ಫಲಿತಾಂಶ ಶೇಕಡಾ 54.53 ಬಂದಿದೆ. ಹಾಗಾಗಿ ವಿಷಯವಾರು ಕಡಿಮೆ ಬಂದಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿಷಯ ಶಿಕ್ಷಕರಿಗೆ ಒಂದು ವಾರ್ಷಿಕ ಬಡ್ತಿಯನ್ನು ತಡೆಹಿಡಿಯಲು ಜಿಲ್ಲಾ ಪಂಚಾಯತ ಸಿಇಒ ಆದೇಶ ಹೊರಡಿಸಿದ್ದಾರೆ. 

ಯಾದಗಿರಿ ಜಿಲ್ಲೆಯ ಮೂರು ತಾಲೂಕಿನ ಸರಕಾರಿ ಹಾಗೂ ಅನುದಾನಿತ ಪ್ರೌಢ ಶಾಲಾ ಮುಖ್ಯ‌ ಶಿಕ್ಷಕರಿಗೆ ಫಲಿತಾಂಶ ಸುಧಾರಣೆಗಾಗಿ ಶೈಕ್ಷಣಿಕ ಹಾಗೂ ಆಡಳಿತ್ಮಾತಕ ಎಲ್ಲಾ ರೀತಿಯ ಸೌವಲತ್ತುಗಳನ್ನು ನೀಡಿಲಾಗಿದೆ. 

ಆದರೂ ಕೂಡಾ ಯಾದಗಿರಿ ಜಿಲ್ಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಫಲಿತಾಂಶ ಶೇಕಡಾ 54.53 ಬಂದಿದೆ. ಈ ವಿಚಾರವಾಗಿ ಜಿಲ್ಲೆಯ ವಿಷಯವಾರು ಸರಾಸರಿಕ್ಕಿಂತಲೂ ಫಲಿತಾಂಶ ಕಡಿಮೆ ಬಂದಿರುವ ವಿಷಯ ಶಿಕ್ಷಕರಿಗೆ ಶಾಲಾ ಹಂತದಲ್ಲಿ ನೋಟಿಸ್ ಜಾರಿಮಾಡಿ ಉತ್ತರ ಪಡೆಯಲು ಸೂಚಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಪ್ರಯುಕ್ತ ಜಿಲ್ಲಾ ಸರಾಸರಿಕ್ಕಿಂತಲೂ ವಿಷಯವಾರು ಕಡಿಮೆ ಬಂದಿರುವ ಸರಕಾರಿ ಹಾಗೂ ಅನುದಾನಿತ ವಿಷಯ ಶಿಕ್ಷಕರಿಗೆ ಒಂದು ವಾರ್ಷಿಕ ಬಡ್ತಿಯನ್ನು ತಡೆಹಿಡಿಯಲು ಮುಖ್ಯಗುರುಗಳಿಗೆ ಶಾಲಾ ಹಂತದಲ್ಲಿ ಕ್ರಮವಹಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯ ಸಿಇಒ ಆದೇಶ ಹೊರಡಿಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button