ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಸಿಐಡಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 73 ಸಾಕ್ಷಿಗಳನ್ನು ಪರಿಗಣಿಸಿ 750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಬಿ.ಎಸ್.ಯಡಿಯೂರಪ್ಪ, ಅರುಣ್, ರುದ್ರೇಶ್ ಹಾಗೂ ಮರಿಸ್ವಾಮಿ ಎಂಬುವವರ ವಿರುದ್ಧ ಸಿಐಡಿ ಅಧಿಕಾರಿಗಳು 1ನೇ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಾಲಕಿ ತಾಯಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೋಕ್ಸೋ ಪ್ರಕರಣದಡಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ